ಪ್ರತಿಯೊಬ್ಬ ಕನ್ನಡಿಗರು ರಾಣಿ ಚೆನ್ನಮ ಬಗ್ಗೆ ತಿಳಿಯಲೇ ಬೇಕು

0
21

ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರ್ಯ ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ ಸಾಹಸ ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖಿರಕ್ಕೇರಿಸಿವೆ. ಚೆನ್ನಮ್ಮನಿಂದ ಕಿತ್ತೂರು ಪ್ರಸಿದ್ಧವಾಗಿದೆ. ಕಿತ್ತೂರಿನ ಇತಿಹಾಸವು ಕ್ರಿ.ಶ. ೧೫೮೬ರಿಂದಲೇ ಆರಂಭವಾಗುತ್ತದೆ. ಚೆನ್ನಮ್ಮ ಹುಟ್ಟಿದ್ದು ೧೭೭೮ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು ೬ ಕಿ.ಮಿ. ದೂರದಲ್ಲಿರುವ ಕಾಕತಿ ಎಂಬಲ್ಲಿ. ಹುಟ್ಟೂರು. ತಂದೆ ಕಾಕತಿಯ ದೇಸಾಯಿ ಧೂಳಪ್ಪ ಗೌಡರು.

ಚನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಈ ಕಠಿಣ ಪರಿಸ್ಥಿತಿಯಲ್ಲಿ ಎದೆಗುಂದದೆ ಅವಳು ರಾಜನಿಷ್ಠರಾದ ಗುರುಸಿದ್ದಪ್ಪ ಹಿಮ್ಮತಸಿಂಗ ನರಸಿಂಗರಾವ ಗುರುಪುತ್ರ ಮತ್ತು ಇತರ ಬೆಂಬಲಿಗರ ನೆರವಿನಿಂದ ತನ್ನ ದತ್ತಕ ಮೊಮ್ಮಗನಿಗೆ ಪಟ್ಟಗಟ್ಟಿದಳು. ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಅದರೆ ಬ್ರಿಟಿಷರು ಕಿತ್ತೂರಿನ ಒಡೆತನವನ್ನೆ ಅಪೇಕ್ಷಿಸಿದಾಗ ಚೆನ್ನಮ್ಮ ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಸಹ ಮಾಡಿದ್ದಾಳೆ.

೨೧ ಅಕ್ಟೋಬರ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ಮೂರನೆಯ ದಿನ ಅಂದರೆ ಅಕ್ಟೋಬರ ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳ್ತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದನು.

ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಕೂಡ ಬಲಿಯಾದರು.ಚೆನ್ನಮ್ಮನಿಗೆ ಹಾಗು ಬ್ರಿಟಿಷರಿಗೆ ಮತ್ತೆ ಪತ್ರವ್ಯವಹಾರ ನಡೆಯುತ್ತದೆ. ೧೮೨೪ ಡಿಸೆಂಬರ್ ೨ ರಂದು ಸ್ಟೀವನ್ಸನ್ ಹಾಗು ಈಲಿಯಟ್ ಇವರ ಬಿಡುಗಡೆಯಾಗುತ್ತದೆ. ಆದರೆ ಮಾತಿಗೆ ತಪ್ಪಿದ ಬ್ರಿಟಿಷರು ಡಿಸೆಂಬರ್ ೩ ರಂದು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸುತ್ತಾರೆ. ಡಿಸಂಬರ್ ೪ ರಂದು ಸರದಾರ ಗುರುಸಿದ್ದಪ್ಪ ಸೆರೆಯಾಳುಗುತ್ತಾರೆ. ಡಿಸೆಂಬರ್ ೫ ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾಗುತ್ತಾಳೆ. ಡಿಸೆಂಬರ್೧೨ ರಂದು ಚೆನ್ನಮ್ಮ ಹಾಗು ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ.

೪ ವರ್ಷಗಳವರೆಗೆ ಸೆರೆಯಾಳಾಗಿ ಉಳಿದ ಚೆನ್ನಮ್ಮ ೧೮೨೫ ಫೆಬ್ರುವರಿ ೨ ರಂದು ನಿಧನಹೊಂದುತ್ತಾಳೆ. ಮುಂದೆ ಮೇ ೨೦ರಂದು ಜಾನಕಿಬಾಯಿ ನಿಧನಳಾಗುತ್ತಾಳೆ. ಆದರೆ ದೇಶ ನಿಷ್ಠರ ಹೋರಾಟ ನಿಂತಿರುವದಿಲ್ಲ. ಕಾಳಗದಲ್ಲಿ ಸೆರೆ ಸಿಕ್ಕು ಆ ಮೇಲೆ ಬಿಡುಗಡೆಯಾದ ಸಂಗೊಳ್ಳಿ ರಾಯಣ್ಣ ೧೮೨೯ರಲ್ಲಿ ಹೋರಾಟ ಮುಂದುವರೆಸುತ್ತಾನೆ. ಇವನ ಹೋರಾಟಕ್ಕೆ ನೆರವು ನೀಡುತ್ತಿರುವ ಸಂಶಯದ ಮೇಲೆ ವೀರಮ್ಮನನ್ನು ಬ್ರಿಟಿಷರು ಮೊದಲು ಕುಸುಗಲ್ಲಿಗೆ ಆ ಬಳಿಕ ಬೇರೊಂದು ಸ್ಥಳಕ್ಕೆ ಒಯ್ಯುತ್ತಾರೆ. ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ. ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ ೧೮೩೦ ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಕಂಪನಿ ಸರಕಾರ ಈ ಕಾರ್ಯಕ್ಕಾಗಿ ಲಿಂಗನಗೌಡ ಮತ್ತು ವೆಂಕನಗೌಡರಿಗೆ ೩೦೦ ರೂಪಾಯಿ ಬಹುಮಾನ ಕೊಡುತ್ತದೆ.

LEAVE A REPLY

Please enter your comment!
Please enter your name here