ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ರವರು ವಿಧಿವಶ

0
949

ರೈತ ಮುಖಂಡರಾದ ಮೇಲುಕೋಟೆ ಕ್ಷೇತ್ರದ ಸರ್ವೋದಯ ಪಕ್ಷದ ಶಾಸಕ ಪುಟ್ಟಣ್ಣಯ್ಯ ರವರು ವಿಧಿವಶರಾಗಿದ್ದಾರೆ. ಅವರಿಗೆ ೬೮ ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದ ಅವರು ಇದ್ದಕಿದ್ದಂತೆ ಎದೆ ನೋವಿನಿಂದ ಕುಸಿದು ಬಿದ್ದು ಬಿಟ್ಟರು ಅವರನ್ನು ತಕ್ಷಣವೇ ಅಲ್ಲೇ ಇರುವ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಹೃದಯಾಘಾತದಿಂದ ನಿಧನರಾದರು.


ರೈತ ನಾಯಕ ಎಂದೇ ಪ್ರಸಿದ್ದಿ ಪಡೆದಿದ್ದ ಇವರು ರೈತರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟಿದ್ದರು, ಹಲವು ಹೋರಾಟಗಳಲ್ಲಿ ರೈತರಿಗೆ ಬೆನ್ನುಲುಬಾಗಿ ಇದ್ದ ಇವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ, ಇವರ ನಿಧನಕ್ಕೆ ರೈತ ಸಂಘ, ಹಸಿರು ಸೇನೆ ಲಕ್ಷಾಂತರ ರೈತರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here