ಶಕ್ತಿದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಬಗ್ಗೆ ತಪ್ಪದೇ ತಿಳಿದುಕೊಳ್ಳಿ

0
1172

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಮಹತ್ವವನ್ನು ನೀವು ಬಲ್ಲಿರಾ? ಇಲ್ಲವಾದಲ್ಲಿ ಓದಿ ತಿಳಿದುಕೊಳ್ಳಿ.

ಚಿಕ್ಕ ಮಂಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಮಡಿಲಲ್ಲಿ, ಭದ್ರಾ ನದಿಯ ಹರಿಯುವ ಹೊರನಾಡು ಒಂದುಸುಂದರ ಸ್ಥಳ. ಹೊರನಾಡಿನಲ್ಲಿರುವ ಅನ್ನಪೂರ್ಣೇಶ್ವರಿ ದೇವಾಲಯದಿಂದಾಗಿ, ಇದು ಒಂದು ಪ್ರೇಕ್ಷಣೀಯ ಸ್ಥಳವಾಗಿ ಪರಿಗಣಿಸಿದೆ. ಹಾಗೂ ಬಹು ಜನ ಪ್ರವಾಸಿಗರು ಬರುವ ಧಾರ್ಮಿಕ ಸ್ಥಳವಾಗಿ ಹೆಸರುವಾಸಿಯಾಗಿದೆ. ಆದರೆ ಇದ ಮೂಲತ: ಇದು ಒಂದು ಚಂದದ ತಾಣ. ಒಂದು ಕಡೆ ಭದ್ರಾನದಿ, ಇನ್ನೊಂದೆಡೆ ಎತ್ತರವಾದ ಬೆಟ್ಟಗಳು, ಆ ಬೆಟ್ಟದ ಕಿಬ್ಬದಿಗಳಲ್ಲಿ ಅಡಿಕೆ ತೋಟಗಳು, ಅಲ್ಲಲ್ಲಿ ಹಸಿರು ತುಂಬಿದ ಗದ್ದೆಗಳು, ಸುತ್ತಲೂ ವಿವಿಧ ರೀತಿಯ ಮರಗಳು, ಅವುಗಳಲ್ಲಾ ಉಲಿಯುತ್ತಿರುವ ಹಕ್ಕಿಗಳು, ಈ ಚಿತ್ರಣವು ಹೊರನಾಡನ್ನು ಸುಂದರ ಸ್ಥಳವನ್ನಾಗಿ ಮಾಡಿದೆ. ಈ ಬೆಟ್ಟ ಗುಡ್ಡಗಳ ಮಧ್ಯೆ ಇರುವ ದಿಬ್ಬದ ಮೇಲಿರುವ ಅನ್ನಪೂರ್ಣೇಶ್ವರಿ ದೇವಾಲಯವು ಹಚ್ಹ ಹಸಿರಿನ ಮಧ್ಯೆ ಕಂಗೊಳಿಸುತ್ತಿದೆ ಎನ್ನಬಹುದು. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಅನ್ನಪೂಣೇಶ್ವರಿ ದೇವಿ ಈ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ಪ್ರಸಾದ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷವಾಗಿದೆ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಹೊತ್ತುಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ. ೨೦ ನೆಯ ಶತಮಾನದ ಕೊನೆಯ ದಶಕಗಳ ತನಕವೂ ಇಲ್ಲಿಗೆ ಬರುವುದು ತುಂಬಾ ಕಷ್ಟದ ದಾರಿಯಾಗಿತ್ತು. ಮತ್ತೊಂದೆಡೆ ಪಶ್ಚಿಮಘಟ್ಟದ ಪರ್ವತಗಳು ಕೋಟೆಯಂತೆ ಈ ಪ್ರದೇಶವನ್ನು ಸುತ್ತುವರಿದಿವೆ. ಆದರೆ, ನವ ಶಿಲಾಯುಗದ ಕಾಲದಿಂದ ಇಲ್ಲಿ ಜನವಸತಿ ಇದ್ದ ಸೂಚನೆಗಳಿವೆ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಹೊರನಾಡಿನ ಅನ್ನಪೂಣೇಶ್ವರಿ ದೇವಿಯ ದರ್ಶನ ಸಾಮಾನ್ಯ ಜನರಿಗೂ ಅತ್ಯಂತ ಹತ್ತಿರದಿಂದ ಲಭ್ಯವಾಗುತ್ತದೆ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಪ್ರಯಾಣ ಮಾಡಬೇಕಾಗುತ್ತದೆ.

ಚಂಡಿಕಾ ಹೋಮ ಈ ಕ್ಷೇತ್ರದ ವಿಶೇಷವಾಗಿರುತ್ತದೆ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಅಲ್ಲಿಗೆ ಹೋಗಿ ಚಂಡಿಕಾ ಹೋಮ ಮಾಡಿಸುವುದರಿಂದ ಮನಸಿನಲ್ಲಿ ಅಂದುಕೊಂಡ ಎಲ್ಲ ಆಸೆಗಳೂ ನೆರವೇರುತ್ತದೆ ಎಂಬ ಪ್ರತೀತಿ ಇದೆ.

ಹೊರನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿದೆ. ಅನ್ನಪೂರ್ಣೇಶ್ವರಿ ದೇವಾಲಯದ ವೈಶಿಷ್ಟ್ಯವೆಂದರೆ, ಯಾವುದೇ ಸಮಯದಲ್ಲಿ ಭೇಟಿ ಕೊಡುವ ಜನರಿಗೂ ಇಲ್ಲಿ ಊಟ ಅಥವಾ ಉಪಹಾರವನ್ನು ನೀಡುವ ಪದ್ದತಿ ಇತ್ತು ರಾತ್ರಿ ಬಂದವರಿಗೂ ತಿನಿಸು ಅಥವಾ ಊಟವನ್ನು ಕೊಡುವ ಪದ್ದತಿ ಇಲ್ಲಿತ್ತು. ಕ್ರಮೇಣ ಇಲ್ಲಿಗೆ ಭೇಟಿ ನೀಡುವ ಜನರ ಸಂಖ್ಯೆ ಜಾಸ್ತಿಯಾದಂತೆಲ್ಲ, ವಸತಿ ವ್ಯವಸ್ಥೆ ಮತ್ತಿತರ ವ್ಯವಸ್ಥೆಗಳ ಅನುಕೂಲಗಳು ಹೆಚ್ಚಾದವು ಮತ್ತು ಅಂಗಡಿ ಮುಂಗಟ್ಟುಗಳೂ ತಲೆ ಎತ್ತಿದವು.ಇಲ್ಲಿನ ದೇವಾಲಯದ ಆಳೆತ್ತರದ ಅನ್ನಪೂರ್ಣೇಶ್ವರಿ ವಿಗ್ರಹವು ಆಕರ್ಷಕವಾಗಿದೆ. ರುಚಿಕಟ್ಟು ಹಾಗೂ ಸ್ವಾದಿಷ್ಟ. ಅವಲಕ್ಕಿ, ಮಜ್ಜಿಗೆ, ಕಾಫಿ ಬೆಳಗಿನ ಉಪಾಹಾರಕ್ಕಾದರೆ, ಮಧ್ಯಾಹ್ನದ ಭೋಜನಕ್ಕೆ ಅನ್ನ, ಸಾರು, ಚಿತ್ರಾನ್ನ ಹಾಗೂ ಪಾಯಸ. ಊಟದ ಕೊನೆಗೆ ಹೊಟ್ಟೆ ತಂಪೆನಿಸಲು ಮಜ್ಜಿಗೆ. ರಾತ್ರಿಯೂ ಸ್ವಾದಿಷ್ಟ ಭೋಜನ. ಅಡುಗೆ ಕೋಣೆ ಕೂಡ ಆಧುನಿಕ ಸೌಲಭ್ಯಗಳಿಂದ ಸಜ್ಜುಗೊಂಡಿದೆ.

ನಮ್ಮ ಕನ್ನಡ ಕಿಂಗ್ ವೆಬ್ಸೈಟ್ ನಾ ಎಲ್ಲ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತದೆ. ಯಾರಾದರು ಕದ್ದಲ್ಲಿ ಅಥವಾ ಮಾಹಿತಿ ಕಾಪಿ ಮಾಡಿ ಬೇರೆ ಕಡೆ ಹಾಕಿದಲ್ಲಿ ಅಂತ ಜನರ ವಿರುದ್ದ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಚ್ಚರಿಕೆ.

LEAVE A REPLY

Please enter your comment!
Please enter your name here