ಉತ್ತರಾಯಣ ಪುಣ್ಯಕಾಲದ ಶುಭದಿನ ಮಕರ ಸಂಕ್ರಾಂತಿ

0
819

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ನಿರಯಣ ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸರಿ ಸುಮಾರಿಗೆ ಬರುತ್ತದೆ. ಹಿಂದೆ ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರ ದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ ಬೆಚ್ಚನೆಯ ವಾತಾವರಣ ಆರಂಭವಾಗಿ ಬೆಳೆ ಕಟಾವಿನ ಕಾಲವೂ ಆಗಿತ್ತು.

ರೈತರು ತಮ್ಮ ಹೊಸ ಬೆಳೆಯಾದ ಭತ್ತ ಕಬ್ಬು ಎಳ್ಳು ಇತ್ಯಾದಿಗಳನ್ನು ಹೊಲಗಳಿಂದ ಮನೆಗೆ ತಂದು ಅವುಗಳನ್ನು ದಾನ ಮಾಡಿದ ನಂತರ ಸೇವಿಸುವ ಪದ್ಧತಿಯು ಪುರಾತನ ಕಾಲದಿಂದಲೇ ನಡೆದುಕೊಂಡು ಬಂದಿದೆ. ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ ಗ್ರಹಗಳ ಸ್ಥಿತಿ ಗತಿ ರಾಶಿ ನಕ್ಷತ್ರ ಗ್ರಹಣ ಅಸ್ತೋದಯಗಳನ್ನು ನಿರ್ಣಯಿಸಿ ಶುಭ ಫಲಗಳನ್ನು ತೋರುತ್ತಾ, ಹಬ್ಬ ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ.

ಈಗ ಉತ್ತರಾಯಣ ಡಿಸೆಂಬರ್ ೨೨ಕ್ಕೇ ಆದರೂ ಹಿಂದಿನಂತೆಯೇ ಜನವರಿ ೧೪ ಅಥವ ೧೫ ರಂದು ನಡೆಯುವ ಮಕರ ಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ ಕಥೆಯಲ್ಲಿ ಇಚ್ಚಾ ಮರಣಿಯಾದ ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವು ಸಹ ಇದೆ. ಈ ದಿನ ಬೆಂಗಳೂರು ನಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಗೆ ಸೂರ್ಯನ ಕಿರಣಗಳು ಸ್ಪರ್ಶ ಮಾಡುತ್ತದೆ. ಈ ಸಮಯದಲ್ಲಿ ಶಿವನ ದರ್ಶನ ಪಡೆದರೆ ವಿಶೇಷ ಲಾಭ ಪಡೆದರೆ ನಿಮಗೆ ಶುಭ ಫಲ ನಿಮಗೆ ಹೆಚ್ಚಿಗೆ ಸಿಗಲಿದೆ ನೀವು ಅಂದುಕೊಂಡ ಎಲ್ಲ ಕೆಲಸ ಕಾರ್ಯಗಳು ಸುಲಭವಾಗಿ ನೆರವೇರುತ್ತದೆ. ನಮ್ಮ ವೆಬ್ಸೈಟ್ ಎಲ್ಲ ಬರಹಗಳಿಗೆ ಮತ್ತು ಚಿತ್ರಗಳಿಗೆ ವಿಶೇಷ ಕಾಪಿ ರೈಟ್ಸ್ ಹೊಂದಿದ್ದು ನಮ್ಮ ಅನುಮತಿ ಇಲ್ಲದೆ ಚಿತ್ರಗಳು ಅಥವ ಬರವಣಿಗೆ ನಕಲು ಮಾಡಿದ್ರೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ.

LEAVE A REPLY

Please enter your comment!
Please enter your name here