ಸಣ್ಣ ಮನೆ ಮದ್ದು ಮಾಡಿ ಕೂದಲು ಸುಪರ್ ಆಗಿ ಬೆಳೆಯುತ್ತೆ

0
1027

ಚಿಕ್ಕ ವಯಸ್ಸಿಗೆ ನಿಮ್ಮ ಕೂದಲು ಉದುರಿ ಹೋಗುತ್ತಿದೆಯ. ಹಾಗಾದರೆ ನಾವು ಹೇಳುವ ಕೆಲವು ಸಲಹೆಗಳನ್ನು ಪಾಲಿಸಿರಿ ಮತ್ತು ದಟ್ಟವಾದ ಕೂದಲನ್ನು ಪಡೆಯಿರಿ. ಮೊದಲಿಗೆ ಮೆಂತ್ಯ ಉಪಯೋಗಿಸಿ ಕೂದಲ ಆರೈಕೆ ಮಾಡುವ ಬಗೆ ತಿಳಿಯಿರಿ: ಅರ್ಧ ಬಟ್ಟಲು ಮೆಂತ್ಯವನ್ನು ರಾತ್ರಿಯೇ ನೆನೆಯಲು ಹಾಕಿರಿ. ಬೆಳಗ್ಗೆ ಎದ್ದು ಚೆನ್ನಾಗಿ ಬಂದಿರುವ ಮೆಂತ್ಯವನ್ನು ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ತಲೆಗೆ ಹಚ್ಚಿಕೊಳ್ಳದೆ ಎರಡರಿಂದ ಮೂರು ಗಂಟೆಗಳ ಕಾಲ ಅದನ್ನು ಒಣಗಲು ಬಿಡಿ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೆ ಎರಡರಿಂದ ಮೂರು ಬಾರಿ ಈ ರೀತಿ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗಿ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಮೊಟ್ಟೆಯನ್ನು ಬಳಸಿ ಕೂದಲು ಆರೈಕೆ ಮಾಡುವ ಬಗ್ಗೆ ತಿಳಿಯಿರಿ: ಮೊಟ್ಟೆಯ ಬಿಳಿ ಭಾಗವನ್ನು ಬೇರ್ಪಡಿಸಿ ಅದಕ್ಕೆ 2 ಚಮಚ ಆಲಿವ್ ಆಯಿಲ್ ಅನ್ನು ಮತ್ತು 1 ಚಮಚ ಜೇನುತುಪ್ಪವನ್ನು ಮಿಶ್ರಣ ಮಾಡಿ. ನಂತರ ಈ ಮಿಶ್ರಣವನ್ನು ಕೂದಲುಗಳ ಬುಡಕ್ಕೆ ಚೆನ್ನಾಗಿ ಹಚ್ಚಿ ನಂತರ ಇದನ್ನು ಒಂದು ಗಂಟೆಗಳ ಕಾಲ ಒಣಗಲು ಬಿಡಿ. ನಂತರ ನೀವು ಪ್ರತಿದಿನ ಉಪಯೋಗಿಸುವ ಶಾಂಪೂವಿನಿಂದ ಚೆನ್ನಾಗಿ ತೊಳೆಯಿರಿ ಈ ರೀತಿ ಮಾಡುವುದರಿಂದ ನಿಮಗೆ ಸಾಕಷ್ಟು ಪ್ರಮಾಣದಲ್ಲಿ ಪೌಷ್ಟಿಕಾಂಶ ದೊರೆಯುತ್ತದೆ ಮತ್ತು ಕೂದಲು ಸೊಂಪಾಗಿ ಬೆಳೆಯುತ್ತದೆ.

ಆಲೂಗೆಡ್ಡೆಯ ಸಿಪ್ಪೆಯನ್ನು ತೆಗೆದು ಅದನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ ನಂತರ ಆಲೂಗಡ್ಡೆಯನ್ನು ಚೆನ್ನಾಗಿ ಜಜ್ಜಿ ಪೇಸ್ಟ್ ರೀತಿ ಮಾಡಿಕೊಳ್ಳಿ ನಂತರ ಇದಕ್ಕೆ ಮೊಟ್ಟೆಯ ಬಿಳಿ ಭಾಗವನ್ನು ಮಿಶ್ರಣ ಮಾಡಿ ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ನಂತರ ಇದನ್ನು ಚೆನ್ನಾಗಿ ಮಿಕ್ಸ್ ಮಾಡಿರಿ. ಈ ಮಿಶ್ರಣವನ್ನು ತಲೆಗೆ ಹಚ್ಚಿರಿ. ಅರ್ಧ ಗಂಟೆಗಳ ಕಾಲ ಹಾಗೆಯೇ ಒಣಗಲು ಬಿಡಿ. ಅನಂತರ ಬೆಚ್ಚಗಿನ ನೀರಿನಿಂದ ತಲೆಯನ್ನು ಶುಭ್ರವಾಗಿ ತೊಳೆಯಿರಿ. ಈ ರೀತಿ ಮಾಡುವುದರಿಂದ ನಿಮ್ಮ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಈರುಳ್ಳಿಯ ಸಿಪ್ಪೆಯನ್ನು ತೆಗೆದು ನಂತರ ಇದನ್ನು ಸಣ್ಣದಾಗಿ ಕತ್ತರಿಸಿ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ. ನಂತರ ಇದರಿಂದ ಬರುವ ರಸವನ್ನು ಕೂದಲುಗಳ ಬುಡಕ್ಕೆ ತಲುಪುವಂತೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿರಿ. ಕೆಲಕಾಲಗಳ ನಂತರ ಕೂದಲನ್ನು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೆ ಎರಡರಿಂದ ಮೂರು ಬಾರಿ ಈ ರೀತಿ ಮಾಡುವುದರಿಂದ ನಿಮ್ಮ ಕೂದಲು ಉದುರುವುದು ಕಡಿಮೆಯಾಗಿ ಕೂದಲು ಸೊಂಪಾಗಿ ಬೆಳೆಯುತ್ತದೆ. ಈರುಳ್ಳಿಯ ರಸವನ್ನು ಕೂದಲಿಗೆ ಹಚ್ಚುವುದರಿಂದ ಈರುಳ್ಳಿಯಲ್ಲಿರುವ ಸಲ್ಫರ್ ಅಂಶವು ನಮ್ಮ ಕೂದಲುಗಳಿಗೆ ಸೇರುವುದರಿಂದ ಆ ಕೂದಲಿಗೆ ಸಾಕಷ್ಟು ಪ್ರಮಾಣದಲ್ಲಿ ಪೌಷ್ಟಿಕಾಂಶ ದೊರೆತಂತಾಗುತ್ತದೆ ಇದರಿಂದ ಕೂದಲು ಚೆನ್ನಾಗಿ ಬೆಳೆಯುತ್ತದೆ. ಮೇಲೆ ಹೇಳಿರುವ ಸಲಹೆಗಳನ್ನು ಪಾಲಿಸಿರಿ ಮತ್ತು ನಿಮ್ಮ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಿ. ಈ ಮಾಹಿತಿ ತಪ್ಪದೇ ಶೇರ್ ಮಾಡಿ ಎಲ್ಲರಿಗು ಸಹಾಯ ಆಗಲಿ.

LEAVE A REPLY

Please enter your comment!
Please enter your name here