ಕೃಷ್ಣನ ಜನ್ಮದ ಹಿಂದೆ ಅಡಗಿರುವ ರಹಸ್ಯ ಏನು ಗೊತ್ತಾ?

0
627

ವಸುದೇವ ಹಾಗೂ ರೋಹಿಣಿಯ ಮಗನಾಗಿ ಮಹಾವಿಷ್ಣುವಿನ ಎಂಟನೆಯ ಅವತಾರವಾಗಿ ಶ್ರೀ ಕೃಷ್ಣನು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಜನಿಸಿದನು. ಹಾಗಾಗಿ ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಶ್ರಾವಣಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳವಾಗಿದೆ. ಕೃಷ್ಣನು ಹುಟ್ಟಿದೊಡನೆ ಅವರ ತಂದೆ ವಸುದೇವ ಅವನನ್ನು ಸೋದರ ಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು. ಕಂಸ ತಂದೆ ಉಗ್ರಸೇನರನ್ನು ಬಂಧಿಸದಲ್ಲಿಟ್ಟು ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣ ಕಂಸನು ದೇವಕಿ ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ 7 ಮಕ್ಕಳನ್ನು ಕೊಂದನು. 8 ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು. ಕೃಷ್ಣಜನ್ಮಾಷ್ಟಮಿಯ ದಿನದಂದು ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ.

ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ. ಕೃಷ್ಣನುಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8 ನೇ ಮಗನಾಗಿ ಜನಿಸಿದನು. ಕೃಷ್ಣ ಗೋಕುಲ ಹಾಗು ವೃಂದಾವನದಲ್ಲಿ ಬಲರಾಮನ ಜತೆ ಬೆಳೆದು ಕೊನೇಗೆ ಮಥುರಾಗೆ ಬಂದು ಕಂಸನನ್ನು ಕೊಂದನು. ಇದು ಶ್ರೀ ಕೃಷ್ಣನ ಜನನದ ಕತೆಯಾಗಿದೆ. ಕೃಷ್ಣನ ಅದ್ಭುತ ಜನ್ಮ ಕಥೆ ತಿಳಿಯಿತಿ ಅಲ್ಲವೇ ಮರೆಯದೇ ಶೇರ್ ಮಾಡಿ. ನಮ್ಮ ವೆಬ್ಸೈಟ್ ಬರಹಗಳಿಗೆ ವಿಶೇಷ ಕಾಪಿ ರೈಟ್ಸ್ ಹೊಂದಿದ್ದು ಅನುಮತಿ ಇಲ್ಲದೆ ಚಿತ್ರಗಳು ಅಥವ ಬರಹಗಳು ನಕಲು ಮಾಡಿದ್ರೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ.

LEAVE A REPLY

Please enter your comment!
Please enter your name here